ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಾರಂದೂರು ಸಮೀಪ ಟ್ರಾಕ್ಟರ್ ಹಾಗೂ ಕಾರ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೃತಿ(21) ಮೃತಪಟ್ಟ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಅಪಘಾತದಲ್ಲಿ ಕಾರ್ ನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದಿಂದ ಕುಟುಂಬದವರೊಂದಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಅಮೃತಾಪುರಕ್ಕೆ ಕಾರ್ ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಾಗದನಗರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.