
ಚಿತ್ರದುರ್ಗ: ಮರಕ್ಕೆ ಕಾರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಬೀರೇನಹಳ್ಳಿ ಸಮೀಪ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಬೀರೇನಹಳ್ಳಿ ಸಮೀಪ ಅಪಘಾತ ಸಂಭವಿಸಿದೆ.
ಬೆಂಗಳೂರಿನ ವಿಶಾಲಾಕ್ಷಿ(70), ಸುದೀಕ್ಷಾ(17) ಮೃತಪಟ್ಟವರು ಎಂದು ಹೇಳಲಾಗಿದೆ. ಭದ್ರಾವತಿಯಿಂದ ಬೆಂಗಳೂರಿಗೆ ತೆರಳುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು ಕಾರ್ ನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.