alex Certify BREAKING: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಐವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಐವರು ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಆಸ್ಪತ್ರೆಯಲ್ಲಿ ಮಗು ಕೊನೆಯುಸಿರೆಳೆದಿದೆ.

ಆಂಧ್ರಪ್ರದೇಶದ ಮೆಹಬೂಬ ನಗರ ಜಿಲ್ಲೆ ಕೊತಕೋಟ ಬೈಪಾಸ್ ನಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಎರ್ಟಿಗಾ ಕಾರ್ ನಲ್ಲಿ ಬಳ್ಳಾರಿ ಮೂಲದವರು ಹೈದರಾಬಾದ್ ಗೆ ಪ್ರಯಾಣಿಸುತ್ತಿದ್ದರು.

ಬಳ್ಳಾರಿ ಮೂಲದ ಫಾತಿಮಾ(50), ಅಬ್ದುಲ್ ರೆಹಮಾನ್(30), ಬುಸ್ರಾ(2), ವಾಸೀಂ(1), ಮಾರಿಯಾ(32) ಮೃತಪಟ್ಟವರು ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...