
ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾಗಿದ್ದು, ಸಿಎಂ ಸಿದ್ಧರಾಮಯ್ಯ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ.
ಅಪಘಾತದಲ್ಲಿ 10 ಮಂದಿ ಸಾವಿನ ಸುದ್ದಿ ಕೇಳಿ ಸಂಕಟವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಕುರುಬೂರು ಬಳಿ ನಡೆದ ಭೀಕರ ಅಪಘಾತದಲ್ಲಿ 10 ಜನ ಸಾವನ್ನಪ್ಪಿದ್ದಾರೆ. ಮೃತಪಟ್ಟವರು ಬಳ್ಳಾರಿ ತಾಲೂಕಿನ ಸಂಗನಕಲ್ಲು ನಿವಾಸಿಗಳು. ಖಾಸಗಿ ಬಸ್, ಇನೋವಾ ಕಾರ್ ಅಪಘಾತದಲ್ಲಿ ನಾಲ್ವರು ಪುರುಷರು, ಮೂವರು ಮಹಿಳೆಯರು, ಮೂವರು ಮಕ್ಕಳು ಸೇರಿ 10 ಜನ ಸಾವನ್ನಪ್ಪಿದ್ದಾರೆ. ಕಾರ್ ನಲ್ಲಿದ್ದ ಮೂವರು ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 16 ಜನ ಗಾಯಗೊಂಡಿದ್ದು, ಟಿ. ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ 16 ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ. ಇಬ್ಬರು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.