
ಹಾವೇರಿ: ಬೊಲೆರೋ ವಾಹನ ಪಲ್ಟಿಯಾಗಿ ನಡೆದ ಅಪಘಾತದಲ್ಲಿ ಮೂವರು ಕುರಿಗಾಹಿಗಳು ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರ ಟೋಲ್ ಸಮೀಪ ಕುರಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ವಾಹನ ಅಪಘಾತಕ್ಕೀಡಾಗಿದೆ.
ಮೈಲಾರಪ್ಪ ಕೈದಾಳ(40), ಗುಡ್ಡಪ್ಪ ಕೈದಾಳ(42), ಶಿವಕುಮಾರ ಹೊಳೆಯಪ್ಪನವರ(22) ಮೃತಪಟ್ಟವರು ಎಂದು ಹೇಳಲಾಗಿದೆ. ಬೋಲೇರೋ ವಾಹನದಲ್ಲಿದ್ದ 20 ಕುರಿಗಳು ಕೂಡ ಸಾವನ್ನಪ್ಪಿವೆ. ಕುರಿಗಳನ್ನು ಖರೀದಿಸಿ ಊರಿಗೆ ತೆರಳುತ್ತಿದ್ದರು. ಬಾಗಲಕೋಟೆಯಿಂದ ರಾಣೆಬೆನ್ನೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಸ್ಪತ್ರೆಗೆ ಶಾಸಕ ಬಸವರಾಜ ಶಿವಣ್ಣನವರ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.