alex Certify ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪ ಟಿಂಬರ್ ಲಾರಿ ಮತ್ತು ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಒಬ್ಬ ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಲಿಹಾಳ್ – ಅರಹತೊಳಲು ರಸ್ತೆಯಲ್ಲಿ ಶನಿವಾರ ರಾತ್ರಿ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಒಂದೇ ಬೈಕ್ ನಲ್ಲಿದ್ದ ಮೂವರು ಲಾರಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್ ನಲ್ಲಿದ್ದ ಭದ್ರಾವತಿ ತಾಲೂಕು ಅರಹತೊಳಲು ಗ್ರಾಮದ ಗಗನ್ ಎಂಬುವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೊಳೆಹೊನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...