alex Certify ಡಿವೈಡರ್ ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿವೈಡರ್ ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ರಾಮನಗರ: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ವಂದಾರಗುಪ್ಪೆ ಬಳಿ ನಡೆದಿದೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ವಂದಾರಗುಪ್ಪೆ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿ ಅಮರೇಶ(49), ಏರ್ಪೋರ್ಟ್ ಕಾರು ಚಾಲಕ ಕಾಂತರಾಜ(47) ಮೃತಪಟ್ಟವರು ಎಂದು ಹೇಳಲಾಗಿದೆ. ಮಂಡ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಇಬ್ಬರ ಮೃತದೇಹಗಳನ್ನು ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...