
ಬಾಗಲಕೋಟೆ: ದಾವಣಗೆರೆಯಲ್ಲಿ ಆಯೋಜಿಸಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ತೆರಳುತ್ತಿದ್ದ ಕ್ರೂಸರ್ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಹೂಲಗೇರಿ ಸಮೀಪ ನಡೆದಿದೆ.
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಬಳಿ ಕ್ರೂಸರ್ ವಾಹನ ಅಪಘಾತಕ್ಕೀಡಾಗಿದೆ. ಚಿಕ್ಕಆಲಗುಂಡಿ ಗ್ರಾಮದ ಪ್ರಕಾಶ್ ಕಂಬಾರ(35) ಮೃತಪಟ್ಟವರು ಎಂದು ಹೇಳಲಾಗಿದೆ. ಕ್ರೂಸರ್ ವಾಹನದಲ್ಲಿದ್ದ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಳೆ ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಈ ವೇಳೆ ಅಪಘಾತ ಸಂಭವಿಸಿದೆ. ಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.