alex Certify BREAKING: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ; ಡಿವೈಡರ್ ಹಾರಿ ಲಾರಿಗೆ ಕಾರ್ ಡಿಕ್ಕಿ, ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ; ಡಿವೈಡರ್ ಹಾರಿ ಲಾರಿಗೆ ಕಾರ್ ಡಿಕ್ಕಿ, ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಬೆಂಗಳೂರು: ಡಿವೈಡರ್ ಹಾರಿ ಲಾರಿಗೆ ಕಾರ್ ಡಿಕ್ಕಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಅಪಘಾತ ಸಂಭವಿಸಿದ್ದು, ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತರು ಗಾರ್ಡನ್ ಸಿಟಿ ಕಾಲೇಜ್ ವಿದ್ಯಾರ್ಥಿಗಳಾಗಿದ್ದು, ಮೂವರು ವಿದ್ಯಾರ್ಥಿಗಳು, ಓರ್ವ ಯುವತಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿರುವ ಇವರು ಲಾಂಗ್ ಡ್ರೈವ್ ಗೆ ಹೋಗಿ ವಾಪಸ್ ಬರುವಾಗ ಘಟನೆ ನಡೆದಿದೆ. ವೈಷ್ಣವಿ, ಭರತ್, ಸಿರೀಲ್, ವೆಂಕಟ್ ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಸಿರಿಕೃಷ್ಣ, ಅಂಕಿತ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...