alex Certify BREAKING NEWS: ಲಾರಿ ಡಿಕ್ಕಿ: ಭೀಕರ ಅಪಘಾತದಲ್ಲಿ 9 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಲಾರಿ ಡಿಕ್ಕಿ: ಭೀಕರ ಅಪಘಾತದಲ್ಲಿ 9 ಜನ ಸಾವು

ತುಮಕೂರು: ಲಾರಿ ಡಿಕ್ಕಿಯಾಗಿ ಕ್ರೂಸರ್ ನಲ್ಲಿದ್ದ 9 ಜನರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ನಡೆದಿದೆ.

ಅಪಘಾತದಲ್ಲಿ ಕ್ರೂಸರ್ ನಲ್ಲಿದ್ದ 20 ಜನರ ಪೈಕಿ 9 ಜನ ಮೃತಪಟ್ಟಿದ್ದಾರೆ. ಕ್ರೂಸರ್ ಗೆ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಮೃತಪಟ್ಟವರು ರಾಯಚೂರು ಜಿಲ್ಲೆಗೆ ಸೇರಿದವರು. ಅಪಘಾತದಲ್ಲಿ 11 ಜನ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ರೂಸರ್ ಓವರ್ ಟೇಕ್ ಮಾಡಲು ಹೋದ ಲಾರಿ ನಿಯಂತ್ರಣ ತಪ್ಪಿ ಕ್ರೂಸರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...