ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಪಾದಾಚಾರಿಗಳು ಮೃತಪಟ್ಟಿದ್ದಾರೆ.
ಆಶಿಕ್ ಮತ್ತು ಮನೋಜ್ ಕುಮಾರ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕ್ಯಾಂಟರ್ ಚಾಲಕ ಮದ್ಯಪಾನ ಮಾಡಿ ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿದ್ದೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಹೆಬ್ಬಗೋಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಚಾಲಕ ಮತ್ತು ಕ್ಲೀನರ್ ನನ್ನು ವಶಕ್ಕೆ ಪಡೆದಿದ್ದಾರೆ.