
ರಾಯಚೂರು: ಬೊಲೆರೋ ವಾಹನ ಡಿಕ್ಕಿಯಾಗಿ ಮೂವರು ಪಾದಚಾರಿಗಳು ಸಾವನ್ನಪ್ಪಿದ್ದಾರೆ. ರಾಯಚೂರು ತಾಲೂಕಿನ ಹೆಗಸನಹಳ್ಳಿ ಬಳಿ ಅಪಘಾತ ನಡೆದಿದೆ.
ಅಪಘಾತದಲ್ಲಿ ಅಯ್ಯನಗೌಡ(28), ಮಹೇಶ್(24), ಉದಯಕುಮಾರ್(28) ಸಾವನ್ನಪ್ಪಿದ್ದಾರೆನ್ನಲಾಗಿದೆ. ಭೂಷಣ್ ಸೇರಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆರೂ ರಾಯಚೂರು ತಾಲೂಕಿನ ಹೆಗಸನಹಳ್ಳಿಯ ನಿವಾಸಿಗಳಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.