alex Certify BREAKING: ಕೆಟ್ಟು ನಿಂತಿದ್ದ ಲಾರಿ ದುರಸ್ತಿ ಮಾಡುತ್ತಿದ್ದಾಗಲೇ ದುರಂತ, ಪಿಕಪ್ ವಾಹನ ಡಿಕ್ಕಿಯಾಗಿ ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೆಟ್ಟು ನಿಂತಿದ್ದ ಲಾರಿ ದುರಸ್ತಿ ಮಾಡುತ್ತಿದ್ದಾಗಲೇ ದುರಂತ, ಪಿಕಪ್ ವಾಹನ ಡಿಕ್ಕಿಯಾಗಿ ಮೂವರ ಸಾವು

ಮಂಗಳೂರು: ಬೆದ್ರೋಡಿ ಸಮೀಪ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬೆದ್ರೋಡಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಕೆಟ್ಟು ನಿಂತಿದ್ದ ಲಾರಿಗೆ ಪಿಕಪ್ ವಾಹನ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಲಾರಿ ದುರಸ್ತಿ ಮಾಡುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರೆಲ್ಲರೂ ಆಂಧ್ರ ಪ್ರದೇಶ ಮೂಲದವರು ಎಂಬ ಮಾಹಿತಿ ಗೊತ್ತಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...