
ಧಾರವಾಡ: ಟೆಂಪೋ ಟ್ರಾವೆಲ್ಲರ್ ಗೆ ಟಿಪ್ಪರ್ ಡಿಕ್ಕಿಯಾಗಿ ಆರು ಮಂದಿ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಸಮೀಪ ನಡೆದಿದೆ.
ದಾವಣಗೆರೆಯಿಂದ ಗೋವಾಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಗೆ ಟಿಪ್ಪರ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.