ಚಿಕ್ಕಬಳ್ಳಾಪುರ: ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿ ಹೊತ್ತಿ ಉರಿದು ಸುಟ್ಟು ಕರಕಲಾಗಿವೆ.
ಸಿಎನ್‌ಜಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಗೆ ಕಲ್ಲು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಆಗಿದ್ದು, ಡಿಕ್ಕಿಯ ರಭಸಕ್ಕೆ ಬೆಂಕಿ ತಗುಲಿದೆ. ಭಾರೀ ಬೆಂಕಿಯಿಂದಾಗಿ ಲಾರಿಗಳು ರಸ್ತೆಯಲ್ಲೇ ಹೊತ್ತಿ ಉರಿದಿವೆ.
ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಅಪಘಾತ ಸಂಭವಿಸಿದೆ. CNG ಸಿಲಿಂಡರ್ ಲಾರಿ ಟರ್ನ್ ಮಾಡುತ್ತಿದ್ದಾಗ ಹಿಂಬದಿಯಿಂದ ಕಲ್ಲು ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಬೆಂಕಿ ತಗುಲಿದೆ. ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಎರಡೂ ಲಾರಿಗಳ ಚಾಲಕರು ಸೇರಿ ಮೂವರು ಗಾಯಗೊಂಡಿದ್ದಾರೆ.
ಲಾರಿ ಚಾಲಕರು ಗಂಭೀರ ಸ್ಥಿತಿಯಲ್ಲಿದ್ದು, ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಎಸ್ಪಿ ಕುಶಾಲ್ ಚೌಕ್ಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದಾಗಿ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.