ACCIDENT : ಬಸ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ದುರ್ಮರಣ, ಓರ್ವನಿಗೆ ಗಾಯ

ಜೈಪುರ: ರಾಜಸ್ಥಾನದ ಡುಂಗರಪುರ ಜಿಲ್ಲೆಯಲ್ಲಿ ಕಾರು ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ, ಕಾರು ಚಾಲಕ ರಸ್ತೆಯ ರಾಂಗ್ ಸೈಡ್ ನಲ್ಲಿ ಚಾಲನೆ ಮಾಡುತ್ತಿದ್ದರಿಂದ ಈ ಘಟನೆ ನಡೆದಿದೆ ಎಂದಿದ್ದಾರೆ.

ವರದಿಗಳ ಪ್ರಕಾರ, ಖಾಸಗಿ ಬಸ್ ಡುಂಗರಪುರಕ್ಕೆ ಹೋಗುತ್ತಿದ್ದಾಗ ರಸ್ತೆಯ ರಾಂಗ್ ಸೈಡ್ ನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಬಿಚಿವಾಡಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮವಾಗಿ ಕಾರು ಮುಂಭಾಗದಿಂದ ಸಂಪೂರ್ಣವಾಗಿ ಹಾನಿಯಾಗಿದೆ ಎಂದು ಬಿಚಿವಾಡಾ ಎಸ್ಎಚ್ಒ ಮದನ್ಲಾಲ್ ಖತಿಕ್ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read