
ಹಾಸನ: ಹಾಸನ ಹೊರ ವಲಯದ ಈಚನಹಳ್ಳಿ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಐದು ಜನ ಸಾವನ್ನಪ್ಪಿದ್ದಾರೆ.
ಟ್ರಕ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಮಹಿಳೆಯರು, ಇಬ್ಬರು ಪುರುಷರು ಸಾವನ್ನಪ್ಪಿದ್ದು, ಟ್ರಕ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರ್ ನಜ್ಜುಗುಜ್ಜಾಗಿದೆ. ಶವಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ನಡೆಸಿದ್ದಾರೆ.
ಸ್ಥಳಕ್ಕೆ ಹಾಸನ ಎಸ್.ಪಿ. ಮೊಹಮ್ಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.