
ಹಾಸನ: ಟಾಟಾ ಏಸ್ ವಾಹನ, ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಅರಕಲಗೂಡು ತಾಲೂಕಿನ ಮಾದಿಹಳ್ಳಿ ಗ್ರಾಮದ ಬಳಿ ನಡೆದಿದೆ.
ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಮಾದಿಹಳ್ಳಿ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಸವಾರ ಪರಶುರಾಮ್(45), ಕುಮಾರ್(45) ಮೃತಪಟ್ಟಿದ್ದಾರೆ. ಇವರು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದ ನಿವಾಸಿಗಳಾಗಿದ್ದಾರೆ. ಅರಕಲಗೂಡಿನಿಂದ ವಾಪಸ್ ಊರಿಗೆ ಹೋಗುವಾಗ ಅಪಘಾತ ಸಂಭವಿಸಿದೆ. ರೋಡ್ ಹಂಪ್ ಕಾಣದೆ ಡಿಕ್ಕಿ ಬೈಕ್ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.