alex Certify BREAKING NEWS: ಭೀಕರ ಸರಣಿ ಅಪಘಾತದಲ್ಲಿ ನಾಲ್ವರ ಸಾವು, ಟೈಯರ್ ಸ್ಪೋಟದಿಂದ ಲಾರಿ ಪಲ್ಟಿಯಾಗಿ ದುರಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭೀಕರ ಸರಣಿ ಅಪಘಾತದಲ್ಲಿ ನಾಲ್ವರ ಸಾವು, ಟೈಯರ್ ಸ್ಪೋಟದಿಂದ ಲಾರಿ ಪಲ್ಟಿಯಾಗಿ ದುರಂತ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಆಲೂರು ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗದಗ ಮೂಲದ ಹನುಮಪ್ಪ(30), ಪ್ರಶಾಂತ(28), ಗುರಪ್ಪ(30), ರಮೇಶ(30) ಮೃತಪಟ್ಟವರು ಎಂದು ಹೇಳಲಾಗಿದೆ. ಸರಣಿ ಅಪಘಾತದಲ್ಲಿ 10 ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 4ರ ಆಲೂರು ಬಳಿ ಟೈಯರ್ ಸ್ಪೋಟಗೊಂಡ ಲಾರಿ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಲಾರಿ ಪಲ್ಟಿ ಆಗಿದ್ದರಿಂದ ಒಂದು ಕಾರು ಮತ್ತು 6 ಲಾರಿ ನಡುವೆ ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದೆ. ಹಿರಿಯೂರು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...