ನವದೆಹಲಿ: ಹರಿಯಾಣದ ಜಿಂದ್ ನ ಭಿವಾನಿ ರಸ್ತೆಯ ಬೀಬಿಪುರ್ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎಂಟು ಜನರು ಸಾವನ್ನಪ್ಪಿದ್ದಾರೆ.
ಬಸ್ ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತು 12 ಜನರು ಗಾಯಗೊಂಡಿದ್ದಾರೆ. ಬಸ್ ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ಜಿಂದ್ ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ.