
ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಹಲಕರ್ಟಾ ಗ್ರಾಮದ ಬಳಿ ಟ್ಯಾಂಕರ್ ಡಿಕ್ಕಿಯಾಗಿ ಆಟೋದಲ್ಲಿ ತೆರಳುತ್ತಿದ್ದ ಆರು ಜನ ಸಾವನ್ನಪ್ಪಿದ್ದಾರೆ.
ಮೃತರು ಚಿತ್ತಾಪುರದ ನಾಲವಾರ ಗ್ರಾಮದವರು ಎಂದು ಹೇಳಲಾಗಿದೆ. ಚಿತ್ತಾಪುರ ತಾಲೂಕಿನ ಹಲಕರ್ಟಾ ಬಳಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದವರು ಮೃತಪಟ್ಟಿದ್ದಾರೆ. ಟ್ಯಾಂಕರ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಆಟೋದಲ್ಲಿದ್ದ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಸ್ಮಿನ್ ಬೇಗಂ, ಫಾತಿಮಾ, ಅಬೂಬಕರ್, ಮರಿಯಂ, ಮಹಮ್ಮದ್ ಪಾಷಾ, ಆಟೋ ಚಾಲಕ ಬಾಬಾ ಮೃತಪಟ್ಟವರು. ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಿಸಲು ತೆರಳುವಾಗ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಅಪಘಾತದ ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.