alex Certify ಟಾಟಾ ಏಸ್ ವಾಹನ ಪಲ್ಟಿ: ಕ್ರೀಡಾಕೂಟ ಮುಗಿಸಿ ಬರುತ್ತಿದ್ದ 30 ಮಕ್ಕಳಿಗೆ ಗಾಯ: ಸ್ಥಳೀಯರಿಂದ RTOಗೆ ತರಾಟೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಾಟಾ ಏಸ್ ವಾಹನ ಪಲ್ಟಿ: ಕ್ರೀಡಾಕೂಟ ಮುಗಿಸಿ ಬರುತ್ತಿದ್ದ 30 ಮಕ್ಕಳಿಗೆ ಗಾಯ: ಸ್ಥಳೀಯರಿಂದ RTOಗೆ ತರಾಟೆ

ಕೊಪ್ಪಳ: ಟಾಟಾ ಏಸ್ ವಾಹನ ಪಲ್ಟಿಯಾಗಿ 30 ಮಕ್ಕಳು ಗಾಯಗೊಂಡ ಘಟನೆ ಕೊಪ್ಪಳ ತಾಲೂಕಿನ ಹಾಲವರ್ತಿ ಕ್ರಾಸ್ ಸಮೀಪ ನಡೆದಿದೆ.

ಕ್ರೀಡಾಕೂಟಕ್ಕೆ ಬಂದಿದ್ದ ಹಾಲವರ್ತಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳು ವಾಪಸ್ ತೆರಳುವಾಗ ಘಟನೆ ನಡೆದಿದೆ. ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಮುಗಿದ ನಂತರ ಮಕ್ಕಳು ಟಾಟಾ ಎಸ್ ವಾಹನದಲ್ಲಿ ಊರಿಗೆ ಹೊರಟಿದ್ದಾರೆ. ಮಾರ್ಗ ಮಧ್ಯೆ ಆರ್.ಟಿ.ಒ. ವಾಹನ ನಿಲ್ಲಿಸಲು ಸೂಚನೆ ನೀಡಿದ್ದು, ಚಾಲಕ ದಿಢೀರ್ ಬ್ರೇಕ್ ಹಾಕಿದ್ದರಿಂದ ವಾಹನ ಪಲ್ಟಿಯಾಗಿದೆ.

ಇದರಿಂದಾಗಿ ಕೆಳಗೆ ಬಿದ್ದ ಮಕ್ಕಳು ಗಾಯಗೊಂಡಿದ್ದಾರೆ. ಘಟನೆಯನ್ನು ಕಂಡ ಸ್ಥಳಿಯರು ಆರ್.ಟಿ.ಒ. ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮಿಂದಲೇ ಘಟನೆ ನಡೆದಿದೆ ಎಂದು ತಳ್ಳಾಡಿದ್ದಾರೆ. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಪ್ಪಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...