ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ವಾಹನ ಚಾಲಕನ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ನಾಯಿ ಅಡ್ಡ ಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದು ಸಚಿವರು ಗಾಯಗೊಂಡಿದ್ದಾರೆ.
ಸಚಿವರ ಸರ್ಕಾರಿ ಕಾರ್ ಚಾಲಕನ ವಿರುದ್ಧ ಕಿತ್ತೂರು ಠಾಣೆಯಲ್ಲಿ ಕೇಸು ದಾಖಲಾಗಿದೆ. ಸಚಿವರ ಗನ್ ಮ್ಯಾನ್ ಈರಪ್ಪ ಹುಣಸಿಕಟ್ಟಿ ನೀಡಿದ ದೂರಿನ ಮೇರೆಗೆ ಕಾರ್ ಚಾಲಕ ಜಿ. ಶಿವಪ್ರಸಾದ್ ವಿರುದ್ಧ 281, 125ಎ 125ಬಿ ಅಡಿ ಜೀವಕ್ಕೆ ಕುತ್ತು ತರುವ, ಅಜಾಗರೂಕತೆಯಿಂದ ವಾಹನ ಚಾಲನೆ ಕಲಂಗಳಡಿ ಕಿತ್ತೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.