
ಮೈಸೂರು: ರಸ್ತೆ ದಾಟುವಾಗ ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಕಡಿಮೆಯೇ. ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು-ಹುಣಸೂರು ರಸ್ತೆಯಲ್ಲಿ ನಡೆದಿದೆ.
ವ್ಯಕ್ತಿಯೋರ್ವರು ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಸ್ಕಾರ್ಪಿಯೋ ವಾಹನ ಡಿಕ್ಕಿ ಹೊಡೆದಿದೆ. ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಇಲವಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.