alex Certify ಟ್ರಕ್ ಡಿಕ್ಕಿ: ಬೈಕ್ ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರಕ್ ಡಿಕ್ಕಿ: ಬೈಕ್ ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪ ನಡೆದ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದಾರೆ.

ರಾಮಚಂದ್ರಪ್ಪ(40) ಮತ್ತು ಅವರ ಮಕ್ಕಳಾದ ಶಶಾಂಕ್(11), ಆದರ್ಶ್(5) ಮೃತಪಟ್ಟವರು ಎಂದು ಹೇಳಲಾಗಿದೆ. ರಾಮಚಂದ್ರಪ್ಪನವರ ಪತ್ನಿ ಭಾಗ್ಯಮ್ಮ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೊರಬ ತಾಲೂಕಿನ ಗುಂಜನೂರು ಗ್ರಾಮದ ರಾಮಚಂದ್ರಪ್ಪ ಕುಟುಂಬದವರು ಚಿಕ್ಕ ಜಂಬೂರಿಗೆ ವಿಶೇಷ ದೀಪಾವಳಿ ಹಬ್ಬಕ್ಕೆ ಹೊರಟಿದ್ದರು. ದ್ವಿಚಕ್ರವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ರಾಮಚಂದ್ರಪ್ಪ ಹಾಗೂ ಅವರ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...