ಬಾಗಲಕೋಟೆ: ಲಾರಿ -ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು ಕಂಡ ಘಟನೆ ಬಾಗಲಕೋಟೆ ತಾಲೂಕಿನ ಗದ್ದನಕೇರಿ ಸಮೀಪ ನಡೆದಿದೆ.
ಅಪಘಾತದಲ್ಲಿ ಬಸ್ ನಲ್ಲಿದ್ದ ವಿದ್ಯಾರ್ಥಿ ರಾಹುಲ್ ಪಾಟೀಲ್(17) ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 14 ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ರಾಹುಲ್ ಪಾಟೀಲ್ ಬೀಳಗಿ ತಾಲೂಕಿನ ಅರಕೇರಿ ನಿವಾಸಿಯಾಗಿದ್ದಾರೆ. ಅಮಲಜರಿಯಿಂದ ಬಾಗಲಕೋಟೆಗೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿತ್ತು. ಲಾರಿ ಚಾಲಕನ ಆಚಾತುರ್ಯದಿಂದ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.