alex Certify BREAKING: ಸಾರಿಗೆ ಬಸ್ –ಮಿನಿ ಬಸ್ ಡಿಕ್ಕಿ: ಅಪಘಾತದಲ್ಲಿ ಪ್ರವಾಸಕ್ಕೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಾರಿಗೆ ಬಸ್ –ಮಿನಿ ಬಸ್ ಡಿಕ್ಕಿ: ಅಪಘಾತದಲ್ಲಿ ಪ್ರವಾಸಕ್ಕೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಗಾಯ

ಹಾಸನ: ಸಾರಿಗೆ ಬಸ್ -ಮಿನಿ ಬಸ್ ನಡುವೆ ಡಿಕ್ಕಿಯಾಗಿ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೇಲೂರು ತಾಲೂಕಿನ ಸೂಲದೇವರಹಳ್ಳಿ ಸಮೀಪ ನಡೆದಿದೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸೂಲದೇವರಹಳ್ಳಿ ಬಳಿ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ನಲ್ಲಿದ್ದ 12 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಚನ್ನರಾಯಪಟ್ಟಣದ ಕಾಲೇಜೊಂದರ ವಿದ್ಯಾರ್ಥಿಗಳು ಪ್ರವಾಸಕ್ಕೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ. ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...