
ಕಲಬುರಗಿ: ಬೈಕ್ ಗೆ ಸಿಮೆಂಟ್ ಟ್ಯಾಂಕರ್ ಡಿಕ್ಕಿಯಾಗಿ ಶಿಕ್ಷಕರಿಬ್ಬರು ಸಾವನ್ನಪ್ಪಿದ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಳಿ ನಡೆದಿದೆ.
ಸಿದ್ದರಾಮಪ್ಪ(60), ನಾನಾಗೌಡ ಪಾಟೀಲ್ (55) ಮೃತಪಟ್ಟವರು ಎಂದು ಹೇಳಲಾಗಿದೆ. ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಸಿಮೆಂಟ್ ಟ್ಯಾಂಕರ್ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.