
ಹೈದರಾಬಾದ್: ತೆಲಂಗಾಣದ ನಾಗರ ಕರ್ನೂಲ್ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಹೈದರಾಬಾದ್ -ಶ್ರೀಶೈಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ಕಾರುಗಳು ನಜ್ಜುಗುಜ್ಜಾಗಿದೆ.
ನಜ್ಜುಗುಜ್ಜಾಗಿದ್ದ ವಾಹನಗಳಿಂದ ಮೃತದೇಹಗಳನ್ನು ಹೊರ ತೆಗೆಯಲು ಹರಸಾಹಸ ನಡೆಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.