alex Certify ಕಾರ್ ಗಳ ಮುಖಾಮುಖಿ ಡಿಕ್ಕಿ, 8 ಮಂದಿ ಸಾವು: ನಜ್ಜುಗುಜ್ಜಾದ ವಾಹನಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಗಳ ಮುಖಾಮುಖಿ ಡಿಕ್ಕಿ, 8 ಮಂದಿ ಸಾವು: ನಜ್ಜುಗುಜ್ಜಾದ ವಾಹನಗಳು

ಹೈದರಾಬಾದ್: ತೆಲಂಗಾಣದ ನಾಗರ ಕರ್ನೂಲ್ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಹೈದರಾಬಾದ್ -ಶ್ರೀಶೈಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ಕಾರುಗಳು ನಜ್ಜುಗುಜ್ಜಾಗಿದೆ.

ನಜ್ಜುಗುಜ್ಜಾಗಿದ್ದ ವಾಹನಗಳಿಂದ ಮೃತದೇಹಗಳನ್ನು ಹೊರ ತೆಗೆಯಲು ಹರಸಾಹಸ ನಡೆಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...