ಟೆಂಪೋ ಹಾಗೂ ಟ್ರಕ್ ನಡುವೆ ಸಂಭವಿಸ ಭೀಕರ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆ-ನಾಸಿಕ್ ಹೆದ್ದಾರಿಯಲ್ಲಿ ನಡೆದಿದೆ.
ಟೆಂಪೋವೊಂದು ಟ್ರಕ್ ಗೆ ಡಿಕ್ಕಿ ಹೊಡೆದಿದ್ದು, ಬಳಿಕ ರಸ್ತೆ ಬದಿ ನಿಂತಿದ್ದ ಬಸ್ ಗೆ ಗುದ್ದಿದೆ. ಅಪಘಾತದಲ್ಲಿ ಸ್ಥಳದಲ್ಲೇ 9 ಜನರು ಸಾವನ್ನಪ್ಪಿದ್ದಾರೆ. ಟೆಂಪೋ ನಾರಾಯಣಗಾಂವ್ ಕಡೆ ತೆರಳುತ್ತಿದ್ದ ವೆಳೆ ಈ ಅಪಘಾತ ಸಂಭವಿಸಿದೆ.
ಟೆಂಪೋದಲ್ಲಿದ್ದ 9 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅವಶೇಷಗಳನ್ನು ತೆರವುಗೊಳಿಸಿದ್ದಾರೆ. ಮೃತರ ಗುರುತು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.