alex Certify ಅಪಘಾತದಲ್ಲಿ ವಿದೇಶಿ ಪ್ರವಾಸಿಗ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಘಾತದಲ್ಲಿ ವಿದೇಶಿ ಪ್ರವಾಸಿಗ ದುರ್ಮರಣ

ಕೊಪ್ಪಳ: ಬೈಕ್ ಸ್ಕಿಡ್ ಆಗಿ ಬಿದ್ದು ವಿದೇಶಿ ಪ್ರವಾಸಿಗ ಮೃತಪಟ್ಟ ಘಟನೆ ಕೊಪ್ಪಳ ತಾಲೂಕಿನ ಬಸಾಪುರ ಸಮೀಪ ನಡೆದಿದೆ.

ಫ್ರಾನ್ಸ್ ದೇಶದ ಪ್ರವಾಸಿಗ ಮೊನ್ಸಲರ್(63) ಮೃತಪಟ್ಟವರು ಎಂದು ಹೇಳಲಾಗಿದೆ. ಅಕ್ಟೋಬರ್ 26ರಂದು ಐದು ಜನ ಸ್ನೇಹಿತರೊಂದಿಗೆ ಹಂಪಿ ಪ್ರವಾಸಕ್ಕೆ ಬಂದಿದ್ದ ಅವರು ಇಂದು ಬೈಕ್ ನಲ್ಲಿ ಗೋವಾಕ್ಕೆ ತೆರಳುತ್ತಿದ್ದರು.

ಬಸಾಪುರ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಸ್ಥಳೀಯರು ಕೊಪ್ಪಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೊಪ್ಪಳ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...