alex Certify BREAKING: ಲಾರಿ ಡಿಕ್ಕಿಯಾಗಿ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲಾರಿ ಡಿಕ್ಕಿಯಾಗಿ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ರಸ್ತೆ ಬದಿಯಲ್ಲಿ ನಿಂತಿದ್ದ ಕ್ಯಾಂಟರ್ ಗೆ ಹಿಂದಿನಿಂದ ಲಾರಿ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಬಳಿ ನಡೆದಿದೆ.

ಕುಮಾರ್(24), ವಿಜಯ್(28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆ ಬದಿ ಕ್ಯಾಂಟರ್ ನಿಲ್ಲಿಸಿ ಟೀ ಕುಡಿಯುತ್ತಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...