ಬೆಂಗಳೂರು: ಬೈಕ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಾರ್ಮೆಂಟ್ಸ್ ಉದ್ಯೋಗಿಗಳು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಬಂಗಾರಪೇಟೆ ತಾಲೂಕಿನ ಬೆಂಗನೂರು ಬಳಿ ಈ ಘಟನೆ ನಡೆದಿದೆ. ದೇಶಿಹಳ್ಳಿ ಗ್ರಾಮದ ನಿವಾಸಿ ಮುತ್ತು ಹಾಗೂ ಮಂಡ್ಯದ ನಾಗಮಂಗಲ ಮೂಲದ ರವಿ ಮೃತರು
ಮೃತರಿಬ್ಬರೂ ಬೆಂಗನೂರು ಬಳಿ ಗಾರ್ಮೆಂಟ್ಸ್ ಕಂಪನಿಯಲ್ಲಿ ಉದ್ಯೋಗಿಗಳಾಗಿದ್ದರು. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕ್ಯಾಂಟರ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಬಂಗಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.