alex Certify ಚಾಲಕನ ನಿಯಂತ್ರಣ ತಪ್ಪಿದ ಕಾರ್ ಪಲ್ಟಿ, ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಲಕನ ನಿಯಂತ್ರಣ ತಪ್ಪಿದ ಕಾರ್ ಪಲ್ಟಿ, ಇಬ್ಬರು ಸಾವು

ವಿಜಯಪುರ: ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗಂಗೂರ ಬಳಿ ನಡೆದಿದೆ.

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಗಂಗೂರ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಸಲೀ(20), ಸೈಫನ್(17)  ಮೃತಪಟ್ಟಿದ್ದಾರೆನ್ನಲಾಗಿದೆ. ಕಾರ್ ನಲ್ಲಿದ್ದ ಮೂವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುನಗುಂದದಿಂದ ಮುದ್ದೇಬಿಹಾಳ ಮಾರ್ಗವಾಗಿ ದೇವರಹಿಪ್ಪರಗಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರ್ ಪಲ್ಟಿಯಾಗಿದೆ ಎನ್ನಲಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...