ವಿಜಯಪುರ ಜಿಲ್ಲೆ ಅರಕೇರಿ ತಾಂಡಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಿನಿ ಗೂಡ್ಸ್ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಮೃತಪಟ್ಟವರನ್ನು ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಲೋಣಿ ಬಿಕೆ ಗ್ರಾಮದ ಶ್ರೀಶೈಲ, ಸಿದ್ಧಯ್ಯ ಹಿರೇಮಠ, ಪಿಂಟು ಹಿರೇಮಠ ಮೃತಪಟ್ಟವರು ಎಂದು ಹೇಳಲಾಗಿದೆ.
ಇಬ್ಬರು ಸ್ಥಳದಲ್ಲೇ ಸಾವು ಕಂಡಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಜಯಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದೆ.