
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಸಂಕದಹೊಳೆ ಸಮೀಪ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಮತಾ(43) ಮೃತಪಟ್ಟವರು ಎಂದು ಹೇಳಲಾಗಿದೆ. ಸ್ಕೂಟಿ ಮತ್ತು ಕಾರ್ ನ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ರಸ್ತೆಗೆ ಬಿದ್ದ ಮಮತಾ ಅವರ ಮೇಲೆ ವಾಹನ ಹರಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.