alex Certify ಅಪಘಾತದಲ್ಲಿ ಯುವಕನ ಸಾವಿಗೆ ನಾನೇ ಕಾರಣ ಎಂದು ಮನನೊಂದು ಸವಾರ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಘಾತದಲ್ಲಿ ಯುವಕನ ಸಾವಿಗೆ ನಾನೇ ಕಾರಣ ಎಂದು ಮನನೊಂದು ಸವಾರ ಆತ್ಮಹತ್ಯೆ

ಮಡಿಕೇರಿ: ರಸ್ತೆ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದು, ಆತನ ಸಾವಿಗೆ ನಾನೇ ಕಾರಣ ಎಂದು ಮನನೊಂದ ಬೈಕ್ ಸವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೆರವನಾಡಿನ ಹೆಚ್.ಡಿ. ತಮ್ಮಯ್ಯ(57) ಆತ್ಮಹತ್ಯೆ ಮಾಡಿಕೊಂಡವರು. ಶುಕ್ರವಾರ ಚೈನ್ ಗೇಟ್ ಬಳಿ ಧನಲ್ ಸುಬ್ಬಯ್ಯ(24) ಎಂಬ ಯುವಕನ ಬೈಕ್ ಗೆ ತಮ್ಮಯ್ಯ ಅವರ ಸ್ಕೂಟರ್ ಡಿಕ್ಕಿ ಹೊಡೆದಿದೆ. ಆಯತಪ್ಪಿ ಕೆಳಗೆ ಬಿದ್ದ ಧನಲ್ ಸುಬ್ಬಯ್ಯ ಅವರ ಮೇಲೆ ಅದೇ ಮಾರ್ಗವಾಗಿ ಬರುತ್ತಿದ್ದ ಲಾರಿ ಹರಿದು ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.

ಘಟನೆಯಿಂದಾಗಿ ಆಘಾತಕ್ಕೆ ಒಳಗಾಗಿದ್ದ ತಮ್ಮಯ್ಯ ಪೊಲೀಸರಿಗೆ ಹೇಳಿಕೆ ನೀಡಿದ ಬಳಿಕ ಅಪಘಾತಕ್ಕೆ ನಾನೇ ಕಾರಣ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...