ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ರಸ್ತೆ ಅಪಘಾತದಲ್ಲಿ ಗಾಯಗೊಂಡು ಒದ್ದಾಡುತ್ತಿದ್ದ ವ್ಯಕ್ತಿಯನ್ನು ಸಚಿವ ಭೈರತಿ ಸುರೇಶ್ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ.
ಸಚಿವ ಭೈರತಿ ಸುರೇಶ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಜೊತೆ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಒದ್ದಾಡುತ್ತಿದ್ದುದನ್ನು ಗಮನಿಸಿದ್ದಾರೆ. ತಕ್ಷಣ ಕಾರು ನಿಲ್ಲಿಸಿ ಕೆಳಗಿಳಿದುಬಂದ ಸಚಿವ ಭೈರತಿ ಸುರೇಶ್, ಗಾಯಾಳುವನ್ನು ವಿಚಾರಿ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸಚಿವರ ಮಾನವೀಯತೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ಈ ಬಗ್ಗೆ ಸಚಿವ ಭೈರತಿ ಸುರೇಶ್ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದು, ಎಲ್ಲರೂ ರಸ್ತೆ ನಿಯಮಗಳನ್ನು ಪಾಲಿಸಿ ಸುರಕ್ಷತೆಯಿಂದ ವಾಹನ ಚಾಲನೆ ಮಾಡಿ ಎಂದು ತಿಳಿಸಿದ್ದಾರೆ.