ಮೈಸೂರು: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಗದ್ದಿಗೆ ಸುಂಕಲ್ ಮಂಟಿ ಬಳಿ ನಡೆದಿದೆ.
ಸೋಮಶೇಖರ್ (30), ನಾಗೇಶ್ (28) ಮೃತರು. ಮೈಸೂರಿನಿಂದ ಹೆಚ್.ಡಿ.ಕೋಟೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಅಪರಿಚಿತ ವಾಹನ ಯುವಕರ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಇಬ್ಬರೂ ಮೃತಪಟ್ಟಿದ್ದಾರೆ. ಈ ಸಂಬಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.