ಬೆಂಗಳೂರು: ಚೀನಾ ಅಪ್ಲಿಕೇಶನ್ ಮೂಲಕ ಸಾಲ ನೀಡಿ ಕಿರುಕುಳ ನೀಡಿದ ಆರೋಪ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯದಿಂದ ಖಾತೆ ಜಪ್ತಿ ಕ್ರಮ ಪ್ರಶ್ನಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಮೆ. ಇಂಡಿಟ್ರೇಡ್ ಫಿನ್ ಕಾರ್ಪ್ ಮತ್ತಿತರರ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠದಿಂದ ಆದೇಶ ನೀಡಲಾಗಿದೆ. ಸಣ್ಣ ಮೊತ್ತದ ಸಾಲ ನೀಡಿ ಹೆಚ್ಚು ಬಡ್ಡಿ ವಸೂಲಿ ಮಾಡಿ ಸಾಲಗಾರರಿಗೆ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಕೇಸ್ ದಾಖಲಿಸಲಾಗಿತ್ತು. ಚೀನಾ ಲಿಂಕ್ ಬಗ್ಗೆಯೂ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ದೇಶದಲ್ಲಿ ಅಸ್ಥಿರತೆ ಸೃಷ್ಟಿಸಲು ವಿದೇಶಿ ಕೈವಾಡದ ಆರೋಪವಿದೆ. ರಾಷ್ಟ್ರದ ಆರ್ಥಿಕ ಭದ್ರತೆ, ನಾಗರೀಕರ ಹಿತಾಸಕ್ತಿ ರಕ್ಷಿಸಬೇಕಿದೆ. ಈ ಹಿನ್ನೆಲೆಯಲ್ಲಿ ತನಿಖೆ ಮುಂದುವರೆಯುವ ಅಗತ್ಯವಿದೆ ಎಂದು ಹೇಳಲಾಗಿದ್ದು, ಖಾತೆ ಜಪ್ತಿ ಪ್ರಶ್ನಿಸಿದ್ದ ಕಂಪನಿಗಳ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.