ಮಂಗಳೂರು: ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಫಾರೂಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪಾಂಡವೇಶ್ವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ, ಆರೋಪಿ ಫಾರೂಕ್ ವಾಟ್ಸಪ್ ಮೂಲಕ ನಗ್ನ ಚಿತ್ರ ಕಳಿಸುವುದು, ಅಶ್ಲೀಲ ಮೆಸೆಜ್ ಕಳಿಸುವುದು ಮಾಡುತ್ತಿದ್ದರು. ಇದಕ್ಕೆ ಯುವತಿ ಸಹಕರಿಸದ ಕಾರಣಕ್ಕೆ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದರು.
ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಫಾರೂಕ್ ಕಾಟದಿಂದ ನೊಂದ ಯುವತಿ ಕೆಲಸವನ್ನು ಬಿಟ್ಟಿದ್ದರು.
ಬಿಜೆಪಿ ಜಿಲ್ಲಾ ಘಟಕದಲ್ಲಿ ಭುಗಿಲೆದ್ದ ಅಸಮಾಧಾನ; ಶಾಸಕರನ್ನು ಕಡೆಗಣಿಸಿ ಪಕ್ಷ ವಿರೋಧಿಗಳಿಗೆ ಮಣೆ; ಮಸಾಲೆ ಜಯರಾಂ ಆಕ್ರೋಶ
ಅಲ್ಲದೇ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಯುವತಿ, ಫಾರೂಕ್ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿ ಫಾರೂಕ್ ನನ್ನು ಬಂಧಿಸಿದ್ದಾರೆ.