ಪ್ರಯಾಗ್ ರಾಜ್: ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದ ವ್ಯಕ್ತಿಯೊಬ್ಬನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.
ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು ಮತ್ತು ಜಿಲ್ಲಾ ಪೊಲೀಸರು ಪ್ರಯಾಗರಾಜ್‌ನ ನೆಹರು ಪಾರ್ಕ್‌ನಲ್ಲಿ ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಅರ್ಬಾಜ್ ಎಂದು ಗುರುತಿಸಲಾಗಿದೆ.
2005ರ ಬಿಎಸ್‌ಪಿ ಶಾಸಕ ರಾಜುಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಅವರನ್ನು ಶುಕ್ರವಾರ ಸಂಜೆ ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಪ್ರಯಾಗ್ ರಾಜ್‌ನಲ್ಲಿ ಹ್ಯುಂಡೈ ಕ್ರೆಟಾ ಎಸ್‌ಯುವಿಯ ಹಿಂಬದಿಯ ಸೀಟಿನಿಂದ ಹೊರಬರುತ್ತಿದ್ದಾಗ ಉಮೇಶ್ ಪಾಲ್ ಅವರ ಮೇಲೆ ಫೈರಿಂಗ್ ಮಾಡಲಾಗಿತ್ತು. ಪಾಲ್ ಅವರನ್ನು ಸ್ವರೂಪ್ ರಾಣಿ ನೆಹರು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದರು. ಪಾಲ್ ಅವರ ಶವಪರೀಕ್ಷೆ ವರದಿಯು 7 ಬಾರಿ ಗುಂಡು ಹಾರಿಸಲ್ಪಟ್ಟಿದೆ ಎಂದು ತಿಳಿಸಿದೆ.
ಹತ್ಯೆಯ ನಂತರ, ಉಮೇಶ್ ಪಾಲ್ ಅವರ ಪತ್ನಿ ಜಯ ಪಾಲ್ ಪ್ರಯಾಗ್ರಾಜ್ ಪೊಲೀಸರನ್ನು ಸಂಪರ್ಕಿಸಿ ಎಫ್ಐಆರ್ ದಾಖಲಿಸಿದ್ದಾರೆ.