alex Certify BREAKING: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಆರೋಪಿಗಳು ಆ. 11 ರವರೆಗೆ ನ್ಯಾಯಾಂಗ ಬಂಧನಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಆರೋಪಿಗಳು ಆ. 11 ರವರೆಗೆ ನ್ಯಾಯಾಂಗ ಬಂಧನಕ್ಕೆ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಂಧಿತರಾದ ಶಫಿಕ್ ಮತ್ತು ಜಾಕೀರ್ ಅವರನ್ನು ಪುತ್ತೂರು ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಪೊಲೀಸರು ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆ. 11 ರವರೆಗೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದೆ.

ಮಂಗಳವಾರ ರಾತ್ರಿ ಪ್ರವೀಣ್ ಅವರನ್ನು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...