ಬೆಂಗಳೂರು : ಮಹಿಳೆ ಜೊತೆ ಕಿರಿಕ್ ಮಾಡಿದ ಹಿನ್ನೆಲೆ ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆಆರ್ ಪೇಟೆ ವಿರುದ್ಧ ದೂರು ದಾಖಲಾಗಿದೆ.
ರಾಜ್ ಕುಮಾರ್ ರಸ್ತೆಯ 10 ನೇ ಕ್ರಾಸ್ ನಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರಿನ ಸುಬ್ರಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.
ಏನಿದು ಘಟನೆ
ಮಹಿಳೆಯೊಬ್ಬರು ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಶಿವರಾಜ್ ಕೆ ಆರ್ ಪೇಟೆ ಬೈಕ್ ನಲ್ಲಿ ಬಂದ ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾರು ಟಚ್ ಮಾಡಿ ನನಗೆ ನಿಂದಿಸಿದ್ದಾರೆ , ಅಲ್ಲದೇ ಸ್ನೇಹಿತರ ಜೊತೆ ಸೇರಿ ನನಗೆ ಬೈದಿದ್ದಾರೆ ಎಂದು ಮಹಿಳೆ ಆರೋಪಿಸಿ ದೂರು ದಾಖಲಿಸಿದ್ದಾರೆ.
ಶಾರದಾ ಬಾಯಿ ಎಂಬ ಮಹಿಳೆ ದೂರು ನೀಡಿದ್ದು, ಮಾ.30 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.