ಗುರುವಾರ ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿ ಮೀನಾ ಎಂಬಾಕೆಯನ್ನು ಪ್ರಕಾಶ್ ಎಂಬ ಯುವಕ ಕಳೆದ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದ್ದ.
ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೊರ್ಲಬ್ಬಿ ಗ್ರಾಮದಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿ, ಬಾಲಕಿಯ ರುಂಡ ಕಡಿದು ಭೀಕರವಾಗಿ ಹತ್ಯೆ ಮಾಡಿದ್ದ. ಅಲ್ಲದೆ ಆಕೆಯ ರುಂಡವನ್ನು ತನ್ನೊಂದಿಗೆ ತೆಗೆದುಕೊಂಡು ಹೋಗಿದ್ದ.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರ ನಡುವೆ ಇದೀಗ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ತನ್ನ ಮನೆ ಸಮೀಪದಲ್ಲಿ ನೇಣು ಬಿಗಿದುಕೊಂಡು ಪ್ರಕಾಶ್ ಸಾವಿಗೆ ಶರಣಾಗಿದ್ದಾನೆ.