alex Certify BIG BREAKING: ಹತ್ತನೇ ತರಗತಿ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಹತ್ತನೇ ತರಗತಿ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿ ಆತ್ಮಹತ್ಯೆಗೆ ಶರಣು

ಗುರುವಾರ ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿ ಮೀನಾ ಎಂಬಾಕೆಯನ್ನು ಪ್ರಕಾಶ್ ಎಂಬ ಯುವಕ ಕಳೆದ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದ್ದ.

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೊರ್ಲಬ್ಬಿ ಗ್ರಾಮದಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿ, ಬಾಲಕಿಯ ರುಂಡ ಕಡಿದು ಭೀಕರವಾಗಿ ಹತ್ಯೆ ಮಾಡಿದ್ದ. ಅಲ್ಲದೆ ಆಕೆಯ ರುಂಡವನ್ನು ತನ್ನೊಂದಿಗೆ ತೆಗೆದುಕೊಂಡು ಹೋಗಿದ್ದ.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರ ನಡುವೆ ಇದೀಗ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ತನ್ನ ಮನೆ ಸಮೀಪದಲ್ಲಿ ನೇಣು ಬಿಗಿದುಕೊಂಡು ಪ್ರಕಾಶ್ ಸಾವಿಗೆ ಶರಣಾಗಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...