ಬೆಂಗಳೂರು: ಬೆಂಗಳೂರಿನಲ್ಲಿ ಯುವತಿ ಮೇಲೆ ಆಸಿಡ್ ಎರಚಿದ್ದ ನಾಗೇಶನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ತಮಿಳುನಾಡಿನಿಂದ ಆತನನ್ನು ಬಂಧಿಸಿ ಕರೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಕೆಂಗೇರಿ ಸೇತುವೆ ಸಮೀಪ ಫೈರಿಂಗ್ ಮಾಡಲಾಗಿದೆ. ಕಾಮಾಕ್ಷಿಪಾಳ್ಯ ಠಾಣೆ ಇನ್ಸ್ಪೆಕ್ಟರ್ ಪ್ರಶಾಂತ್ ಫೈರಿಂಗ್ ಮಾಡಿದ್ದಾರೆ.
ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆತನನ್ನು ಕರೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಪದೇ ಪದೇ ವಾಹನ ನಿಲ್ಲಿಸುವಂತೆ ಹೇಳಿದ್ದಾನೆ. ಮೂತ್ರ ವಿಸರ್ಜನೆಗಾಗಿ ಆರೋಪಿ ವಾಹನ ನಿಲ್ಲಿಸುವಂತೆ ಕೇಳಿದ್ದರಿಂದ ಪೊಲೀಸರು ವಾಹನ ನಿಲ್ಲಿಸಿದ್ದಾರೆ.
ನೈಸ್ ರಸ್ತೆ ಬಳಿ ವಾಹನ ನಿಲ್ಲಿಸಿದಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ್ದಾನೆ. ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಹೇಳಿದ್ದು, ಆರೋಪಿ ಸಂದರ್ಭ ಬಳಸಿಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಪಿಸಿ ಮಹದೇವಯ್ಯ ಮೇಲೆ ಕಲ್ಲಿನಿಂದ ಹಲ್ಲೆಗೆ ಯತ್ನಿಸಿದ್ದು, ಆತನ ಬಲಗಾಲಿಗೆ ಗುಂಡುಹಾರಿಸಿ ಬಂಧಿಸಲಾಗಿದೆ. ಆತನನ್ನು ವಶಕ್ಕೆ ಪಡೆದು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.