
ರಾಮನಗರ: ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ಘಟನೆ ನಡೆದಿದೆ. ಪಾಗಲ್ ಪ್ರೇಮಿ ಸುಮಂತ್(30) ಎಂಬಾತ ಕೃತ್ಯವೆಸಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾತನಾಡಬೇಕಿದೆ ಎಂದು ಬೈಪಾಸ್ ರಸ್ತೆಗೆ ವಿದ್ಯಾರ್ಥಿನಿ ಕರೆಸಿಕೊಂಡಿದ್ದಾನೆ. ಕಾಲ್ ಮಾಡಿದ ಕಾರಣ ತಮ್ಮನ ಜೊತೆಗೆ ಪಿಯುಸಿ ವಿದ್ಯಾರ್ಥಿನಿ ಹೋಗಿದ್ದಾಳೆ. ಮುಖಕ್ಕೆ ಆಸಿಡ್ ಎರಚಿ ಸುಮಂತ್ ಬೈಕ್ ನಲ್ಲಿ ಪರಾರಿಯಾಗಿದ್ದಾನೆ.
.ಮೆಕಾನಿಕ್ ಆಗಿ ಸುಮಂತ್ ಕೆಲಸ ಮಾಡುತ್ತಿದ್ದ ಪಾಗಲ್ ಪ್ರೇಮಿ ಸುಮಂತ್ ಆಸಿಡ್ ಎರಚಿದ್ದು, ವಿದ್ಯಾರ್ಥಿನಿಗೆ ಕನಕಪುರ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ. ಕನಕಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸಿಡ್ ದಾಳಿ ನಡೆಸಿದ ಸುಮಂತ್ ನ್ನು ಕನಕಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.