ಬೆಂಗಳೂರು: ಬಾಣಸವಾಡಿ ಉಪ ವಿಭಾಗದ ಎಸಿಪಿ ಮತ್ತು ಇನ್ಸ್ ಪೆಕ್ಟರ್ ಅವರಿಗೆ ಕಾನ್ ಸ್ಟೆಬಲ್ ಒಬ್ಬರಿಂದ ಬೆದರಿಕೆ ಕರೆ ಬಂದಿಲ್ಲ ಎಂದು ಪೂರ್ವ ವಿಭಾಗದ ಡಿಸಿಪಿ ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗೆ ರೌಡಿ ಕಾರ್ತಿಕೇಯನ್ ಕೊಲೆ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ಆರೋಪದ ಮೇರೆಗೆ ತಮ್ಮ ಮೇಲೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ ಎಂದು ಬಾಣಸವಾಡಿ ವಿಭಾಗದ ಎಸಿಪಿ ಹಾಗೂ ಪಿಐ ಅವರಿಗೆ ಚಾಕುವಿನಿಂದ ಇರಿದು ಇರಿದು ಕೊಲ್ಲುವುದಾಗಿ ಪೊಲೀಸ್ ಕಾನ್ ಸ್ಟೆಬಲ್ ರೇಣುಕಾ ನಾಯಕ್ ಬೆದರಿಸಿದ್ದಾರೆ ಎಂಬ ಆರೋಪ ಕೇಳಿ, ಬಂದಿತ್ತು.
ಈ ಬಗ್ಗೆ ಸ್ಪಷ್ಟಪಡಿಸಿದ ಡಿಸಿಪಿ ಕುಲದೀಪ್ ಕುಮಾರ್ ಆರ್. ಜೈನ್, ದೈನಂದಿನ ಠಾಣೆ ಕರ್ತವ್ಯದಲ್ಲಿ ಕಾನ್ ಸ್ಟೆಬಲ್ ನಿರತರಾಗಿದ್ದು, ಅವರು ಕಡ್ಡಾಯ ರಜೆ ಮೇಲೆ ತೆರಳಿಲ್ಲ. ಎಸಿಪಿ ಮತ್ತು ಪಿಐ ಅವರಿಗೆ ಸಿಬ್ಬಂದಿ ಬೆದರಿಕೆ ಹಾಕಿದಾಗ್ಗಲಿ ಅಥವಾ ಸ್ವೀಕರಿಸಿದ್ದಾಗಲಿ ವರದಿಯಾಗಿಲ್ಲ. ಕೌಟುಂಬಿಕ ಸಮಸ್ಯೆಗಳಲ್ಲಿ ಸಿಲುಕಿ ಕಾನ್ ಸ್ಟೆಬಲ್ ಕೌನ್ಸೆಲಿಂಗ್ ಪಡೆದಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.